ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಹುಭಾಷಾ ನಟಿ ನಮಿತಾ
2017ರಲ್ಲಿ ಚೆನ್ನೈ ಮೂಲಕ ವೀರೇಂದ್ರ ಚೌಧರಿ ಜೊತೆ ಹಸೆ ಮಣೆ ಏರಿದ್ದ ನಮಿತಾ ನಾಲ್ಕು ವರ್ಷಗಳ ಬಳಿಕ ಮುದ್ದು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇತ್ತೀಚೆಗೆ ನಮಿತಾ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಮಿತಾ ಫೋಟೋ ಶೂಟ್ ನೋಡಿ ಮೆಚ್ಚಿಕೊಂಡಿದ್ದ ಅಭಿಮಾನಿಗಳು ಶುಭ ಹಾರೈಸಿದರು.
ಮದುವೆಯ ಬಳಿಕ ಸಿನಿಮಾ ರಂಗದಿಂದ ದೂರವಾಗಿರೋ ನಮಿತಾ ಇಂದಿಗೂ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಮೂಲತಃ ಗುಜರಾತ್ ನ ನಮಿತ ತೆಲುಗು ಚಿತ್ರದ ಮೂಲಕ ಇಂಡಸ್ಟ್ರಿಗೆ ಎಂಟ್ರಿಕೊಟ್ಟು ಬಳಿಕ ಕನ್ನಡ ಹಾಗೂ ತೆಲುಗು ಭಾಷೆಯಲ್ಲೂ ನಟಿಸಿ ಸೈ ಎನಿಸಿಕೊಂಡರು.
