ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದು ಆಕ್ರೋಶ
ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಿಲ್ಲ ಎಂದು ಧನಂಜಯ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿನ್ನೆ ಚಿತ್ರತಂಡದ ಜೊತೆ ಪತ್ರಿಕಾಗೋಷ್ಠಿ ನಡೆಸಿ ಕ್ಷಮೆ ಕೋರಿದ್ದಾರೆ. ಆರೂ ಹಿಂದೂ ಸಂಘಟನೆಗಳ ಆಕ್ರೋಶ ತಣ್ಣಗಾಗಿಲ್ಲ.
ತಿಪಟೂರಿನ ಲಕ್ಷ್ಮೀ ಚಿತ್ರಮಂದಿರದ ಆವರಣದಲ್ಲಿ ಭಜರಂಗ ದಳದ ಕಾರ್ಯಕರ್ತರು ಧನಂಜಯ್ ಫೋಟೋಗೆ ಚಪ್ಪಲಿ ಹಾರ ಹಾಕಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸದ್ದಾರೆ. ಡಾಲಿ ಧನಂಜಯ ಕ್ಷಮೆ ಕೇಳಬೇಕು ಹಾಗೂ ಚಿತ್ರದಲ್ಲಿರುವ ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದ್ದಾರೆ. ಇಲ್ಲದಿದ್ದರೇ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಮಾಡದಂತೆ ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
