• January 1, 2026

ಕೀರ್ತಿ ಸುರೇಶ್ ಗೆ ವಿಶ್ ಮಾಡಿ ಕುತೂಹಲ ಮೂಡಿಸಿದ ಹೊಂಬಾಳೆ ಫಿಲ್ಸ್ಮ್

ಕೆಜಿಎಫ್ ಸಿನಿಮಾದ ಬಳಿಕ ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ನಟರ ಸಿನಿಮಾಗಳಿಗೂ ಹೊಂಬಾಳೆ ಬ್ಯಾನರ್ ಬಂಡವಾಳ ಹೂಡುತ್ತಿದೆ. ಸದ್ಯ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಕೀರ್ತಿ ಸುರೇಶ್ ಹಾಗೂ ಸಿಂಬು ಸಿನಿಮಾಗಳು ಸೆಟ್ಟೇರಲಿದೆಯಂತೆ. ಕಾಂತಾರ ಸಿನಿಮಾದ ಯಶಸ್ಸಿನಲ್ಲಿರುವ ಹೊಂಬಾಳೆ ಬ್ಯಾನರ್ ಇತ್ತೀಚೆಗಷ್ಟೇ ಫಹಾದ್ ಫಾಸಿಲ್ ಜೊತೆ ಧೂಮಂ ಸಿನಿಮಾದ ಮುಹೂರ್ತ ನೆರವೇರಿದೆ. ಇದರ ಜೊತೆ ಜೊತೆಗೆ ಸಿಂಬು ಹಾಗೂ ಕೀರ್ತಿ ಸುರೇಶ್ ಜೊತೆ ಸಿನಿಮಾ ಮಾಡಿರುವ ಬಗ್ಗೆ ಮಾತುಕತೆ ನಡೆದಿದೆ. ಮಹಾನಟಿ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದು, ಅನೇಕ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಕೀರ್ತಿ ಸುರೇಶ್ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರುವ ಮೂಲಕ ಹೊಂಬಾಳೆ ಫಿಲ್ಮ್ಸ್ ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ಹೊಂಬಾಳೆ ಫಿಲ್ಮ್ಸ್ ಕಲಾವಿಧರಿಗೆ ಶುಭಹಾರೈಸುವುದು ಕಡಿಮೆ. ಹೀಗಾಗಿ ಕೀರ್ತಿ ಸುರೇಶ್ ಅವರಿಗೆ ವಿಶ್ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಅಲ್ಲದೆ ಹೊಂಬಾಳೆ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಜೊತೆಗೆ ಕೀರ್ತಿ ಸುರೇಶ್ ಗೆ ಜೋಡಿಯಾಗಿ ನಟ ಸಿಂಬು ನಟಿಸಲಿದ್ದಾರಂತೆ. ಈ ಹಿಂದೆ ‘ಮಾನಾಡು’ ಚಿತ್ರದಲ್ಲಿ ಕೀರ್ತಿ ಸುರೇಶ್ ಹಾಗೂ ಸಿಂಬು ಒಟ್ಟಾಗಿ ನಟಿಸಬೇಕಿತ್ತು. ಆದರೆ ಡೇಟ್ ಸಮಸ್ಯೆಯಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಹೊಂಬಾಳೆ ಫಿಲ್ಮ್ಸ್ ಮೂಲಕ ಈ ಜೋಡಿಗಳು ಒಂದಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿಯಷ್ಟೇ ಹೊರಬೀಳಬೇಕಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now