ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹನಿಮೂನ್ ಎಂಜಾಯ್ ಮಾಡುತ್ತಿರುವ ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್
ಮದುವೆಯ ಫೋಟೋ ಹಂಚಿಕೊಂಡ ಕ್ಷಣದಿಂದಲೂ ಮಹಾಲಕ್ಷ್ಮಿ ಹಾಗೂ ರವೀಂದರ್ ಕುರಿತಾಗಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಹಣದಾಸೆಗಾಗಿ ಮಹಾಲಕ್ಷ್ಮೀ, ರವೀಂದರ್ ಅವರನ್ನು ಮದುವೆಯಾದರು ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿಗಳು ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.
ಮಹಾಲಕ್ಷ್ಮಿ ಮತ್ತು ರವೀಂದರ್ ಮದುವೆಯಾಗುತ್ತಿದ್ದಂತೆ ಮಹಾಲಕ್ಷ್ಮೀ ಕುರಿತಾಗಿ ಸಾಕಷ್ಟು ಸುದ್ದಿಗಳು ಹರಿದಾಡಲು ಶುರುವಾಗಿದೆ. ಮಹಾಲಕ್ಷ್ಮೀಗೆ ಈ ಮೊದಲೇ ಮದುವೆಯಾಗಿದ್ದು ಎರಡು ಮಕ್ಕಳಿದ್ದಾರಂತೆ.ಮೊದಲ ಪತಿಯಿಂದ ವಿಚ್ಚೇದನ ಪಡೆದ ಬಳಿಕ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನವೂ ರಾತ್ರಿ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು.
ಇದೆಲ್ಲಾ ಗೊತ್ತಿದ್ದು ರವೀಂದರ್ ಮಹಾಲಕ್ಷ್ಮೀಯನ್ನು ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿ ಸದ್ಯ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.
