ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
ಆದರೆ ಇಂದು ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಪತ್ತೆಯಾಗಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದ್ದು ಕಾರಿನ ಹಿಂಬಾಗದ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.
ಕಾಲುವೆಯಲ್ಲಿ ಕಾರು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಶೀಲನೆ ನಡೆಸಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಈ ವೇಳೆ ಕಾರನ ಹಿಂಭಾಗದಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.
ಕಾರಿನ ಏರ್ ಬ್ಯಾಗ್ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ. ಕಾರಿನ ಮುಂಭಾಗದ ಗಾಜು ಒಡೆದಿದ್ದು, ಹಿಂಭಾಗದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಂದ್ರಶೇಖರ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ನಾಲೆಗೆ ಬಿದ್ದಿದೆ ಎನ್ನಲಾಗುತ್ತಿದೆ. ಇದೀಗ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
