ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನೀರನ್ನು ಮಿತವಾಗಿ ಬಳಸಲು ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ
ಮೂರು ಏಕದಿನ ಪಂದ್ಯ ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಟೀಂ ಇಂಡಿಯಾ ಆಟಗಾರರು ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಅತಿಯಾಗಿದೆ. ಕಳೆದ ಒಂದು ವರ್ಷದಿಂದ ಹರಾರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು ವೇಸ್ಟ್ ಮಾಡಬೇಡಿ ಎಂದು ಬಿಸಿಸಿಐ ಆಟಗಾರರಿಗೆ ಖಡಕ್ ಸೂಚನೆ ನೀಡಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 18, 20, 22 ರಂದು ನಡೆಯಲಿದ್ದು, ಈಗಾಗಲೇ ಕನ್ನಡಿಗ ಕೆ.ಎಲ್ ರಾಹುಲ್ ಸಾರಥ್ಯದ ಟೀಂ ಇಂಡಿಯಾ ಹರಾರೆಯಲ್ಲಿ ಅಭ್ಯಾಸ ಆರಂಭಿಸಿದೆ.
