• March 14, 2026

ಕಾಂತಾರ ಸಿನಿಮಾದ ಪೋಸ್ಟರ್ ನಲ್ಲಿ ದೇವರಿಗೆ ಅವಮಾನ: ಕ್ರಮಕ್ಕೆ ಒತ್ತಾಯಿಸಿದ ಹಿಂದೂ ಜಾಗರಣ ವೇದಿಕೆ

ಸದ್ಯ ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೇ ಸದ್ದು. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿರುವ ಕಾಂತಾರ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ಕೆಲ ವಿಕೃತ ಮನಸ್ಸಿನ ಮಂದಿ ವಿಕೃತಿ ಮೆರೆದಿದ್ದಾರೆ. ಕರಾವಳಿಯ ದೈವ ಕೋಲದ ಕುರಿತಾಗಿ ರೆಡಿಯಾಗಿರುವ ಸಿನಿಮಾವನ್ನು ದೇಶ, ವಿದೇಶದಲ್ಲೂ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಕಾಂತಾರಕ್ಕೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು ಪರಭಾಷೆಯ ಡಬ್ಬಿಂಗ್ ಗಾಗಿ ಮುಗಿ ಬಿದ್ದಿದ್ದಾರೆ. ಈ ಮಧ್ಯೆ ಕೆಲವು ವಿಕ್ರತ ಮನಸ್ಕರು ಕಾಂತಾರ ಸಿನಿಮಾದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಶಿವಮೊಗ್ಗದ ಎಲ್ಲಾ ಥಿಯೇಟರ್ ಗಳಲ್ಲೂ ಕಾಂತಾರ ಸಿನಿಮಾ ಸದ್ದು ಮಾಡುತ್ತಿದೆ. ಥಿಯೇಟರ್ ತುಂಬೆಲ್ಲಾ ಕಾಂತಾರ ಸಿನಿಮಾದ ಪೋಸ್ಟರ್ ಗಳು ರಾರಾಜಿಸುತ್ತಿವೆ. ಇದನ್ನು ಸಹಿಸದ ಕೆಲವು ಕಿಡಿಗೇಡಿಗಳು ಕಾಂತಾರ ಸಿನಿಮಾದ ಪೋಸ್ಟರ್ ಮುಂದೆ ಅವಹೇಳನಕಾರಿಯಾಗಿ ಬರೆದಿದ್ದಾರೆ. ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ದೇವರಿಗೆ ಅವಹೇಳನಕಾರಿಯಾಗುವಂತಹ ಬರಹಗಳನ್ನು ದುಷ್ಕರ್ಮಿಗಳು ಬರೆದಿದ್ದಾರೆ. ಇದನ್ನು ನೋಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾ ಪೋಸ್ಟರ್ ಮೇಲೆ ‘F * * K YOU G * D’  ಅಂತಾ ಕಿಡಿಗೇಡಿಗಳು ಬರೆದಿದ್ದಾರೆ. ವಿಷಯ ತಿಳಿದ ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅವಹೇಳನಕಾರಿ ಬರಹ ತೆಗೆಸಿದ್ದಾರೆ ಅಲ್ಲದೆ ದೇವರಿಗೆ ಅಪಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now