ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪು ನಮ್ಮ ಜೊತೆ ನಮ್ಮ ನೆನಪಿನಲ್ಲಿ ಸದಾ ಜೀವಂತ: ಅಮಿತಾಬ್ ಬಚ್ಚನ್
ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಬಗ್ಗೆ ಬರೆದುಕೊಂಡಿರುವ ಬಿಗ್ ಬಿ ‘ಗಂಧದ ಗುಡಿಯಲ್ಲಿ ಕರ್ನಾಟಕ ವೈಭವದ ವನ್ಯ ಸಂಪತ್ತನ್ನು ತೆರೆದಿಟ್ಟಿದ್ದಾರೆ. ಅಪ್ಪು ಜೊತೆಗಿನ ಗಂಧದ ಗುಡಿ ಪಯಣ ಮಿಸ್ ಮಾಡ್ಕೋಬೇಡಿ. ಕಡ್ಡಾಯವಾಗಿ ಮಕ್ಕಳು ನೋಡಲೇಬೇಕಾದ ಸಿನಿಮಾ. ವನ್ಯ ಸಂಪತ್ತಿನ ಕುರಿತು ಅರಿಯ ಬೇಕಾದ ಚಿತ್ರ. ಅಪ್ಪು ನಮ್ಮ ಜೊತೆ ನಮ ನೆನಪಿನಲ್ಲಿ ಸದಾ ಜೀವಂತ’ ಎಂದಿದ್ದಾರೆ.
ಅಮಿತಾಬ್ ಬಚ್ಚನ್ ಪೋಸ್ಟ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಮಿತಾಬ್ ಹಾಗೂ ಡಾ.ರಾಜ್ ಕುಮಾರ್ ಕುಟುಂಬಕ್ಕೆ ಸಾಕಷ್ಟು ಆತ್ಮೀಯತೆ ಇದೆ. ಅಪ್ಪು ಚಿಕ್ಕ ಹುಡುಗನಿದ್ದಾಗಿನಿಂದಲೂ ಅಮಿತಾಬ್ ಬಚ್ಚನ್ ಆತನೊಂದಿಗೆ ಒಡನಾಟ ಹೊಂದಿದ್ದರು.
