• December 22, 2025

ಆಗಸ್ಟ್ 10ಕ್ಕೆ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ‘ಜೈಲರ್’ ರಿಲೀಸ್

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.   ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ನಿರ್ದೇಶಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.   ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now