ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹೀರೋ ಆದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್: ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತದಲ್ಲಿ ಭಾಗಿಯಾದ ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ
ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ/ ನಿರ್ಮಾಪಕ ಶ್ರೀನಿವಾಸ್ ವಿಟ್ಟಲ, “ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ಹರೇಶ್ ಪಟೇಲ್ ಅವರೊಟ್ಟಿಗೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಈ ಕಥೆಗೆ ಜಾನಿ ಮಾಸ್ಟರ್ ಸೂಟ್ ಆಗ್ತಾರೆ. ಆ ಕಾರಣಕ್ಕೆ ಅವರಿಗೂ ೨೦ ನಿಮಿಷದಲ್ಲಿ ಸಿನಿಮಾದ ಕಥೆ ಹೇಳಿದೆ. ಕಥೆ ಕೇಳಿ ಅವರಿಂದಲೂ ಓಕೆ ಎಂಬ ಉತ್ತರ ಸಿಕ್ಕಿತು. ಈ ಹಿಂದೆ ಟಿವಿಯಲ್ಲಿ ಕೇವಲ ೧೦ ನಿಮಿಷ ಮಾತ್ರ ರಾಜಕೀಯ ಸುದ್ದಿಗಳು ಪ್ರಸಾರವಾಗುತ್ತಿದ್ದವು. ಇದೀಗ ಅದು ೨೪/೭ ಆಗಿದೆ. ಹಾಗಾಗಿ ನಮ್ಮ ಈ ಸಿನಿಮಾ ಸಹ ರಾಜಕೀಯ ಹಿನ್ನೆಲೆಯಲ್ಲಿ ಮೂಡಿಬರಲಿರುವ ಕಮರ್ಷಿಯಲ್ ಸಿನಿಮಾ. ಸಮಾಜಕ್ಕೆ ಮಹತ್ವದ ಸಂದೇಶವೂ ಇದರಲ್ಲಿದೆ” ಎಂದರು.
ತೆಲುಗು,ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಮೂಡಿಬರಲಿರುವ “ಯಥಾ ರಾಜ ತಥಾ ಪ್ರಜಾ” ಸಿನಿಮಾ ಸೆಪ್ಟೆಂಬರ್ ೧೫ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದ್ದು, ಮೂರು ಶೇಡ್ಯೂಲ್‌ನಲ್ಲಿ ಸಿನಿಮಾ ಮುಗಿಸುವ ಯೋಜನೆ ನಿರ್ದೇಶಕರದ್ದು. ಚಿತ್ರದಲ್ಲಿ ನಾಲ್ಕು ಹಾಡುಗಳಿರಲಿದ್ದು, ರಾಧನ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.
ಈ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿಕೊಡುತ್ತಿರುವ ಜಾನಿ ಮಾಸ್ಟರ್ ಸಹ ಚಿತ್ರದ ಬಗ್ಗೆ ಮಾತನಾಡಿದ್ದಾರೆ. “ಮೆಗಾಸ್ಟಾರ್ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಖುಷಿ ವಿಚಾರ. ಶ್ರೀನಿವಾಸ್ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ಅದೇ ರೀತಿ ವಿಕಾಸ್ ನಟಿಸಿರುವ “ಸಿನಿಮಾ ಬಂಡಿ” ಸಿನಿಮಾ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿದ್ದೇನೆ. ನಾಗೇಶ್ ಅವರೇ ಈ ಚಿತ್ರಕ್ಕೆ “ಯಥಾ ರಾಜ ತಥಾ ಪ್ರಜಾ” ಎಂಬ ಶೀರ್ಷಿಕೆ ನೀಡಿದ್ದಾರೆ. ಒಟ್ಟು ಮೂರು ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಲಿದೆ” ಎಂದಿದ್ದಾರೆ.
“ಜಾನಿ ಮಾಸ್ಟರ್ ಅವರೊಂದಿಗೆ ಕೆಲಸ ಮಾಡುತ್ತಿರುವುದಕ್ಕೆ ಸಂತಸವಿದೆ. ಇದೊಂದು ಪೊಲಿಟಿಕಲ್ ಡ್ರಾಮಾ ಆಧರಿತ ಕಥೆ. ಕಮರ್ಷಿಯಲ್ ಅಂಶಗಳೂ ಸಿನಿಮಾದಲ್ಲಿರಲಿವೆ” ಎಂದರು ವಿಕಾಸ್. ನಟಿ ಶ್ರಷ್ಟಿ ವರ್ಮಾ ಸಹ ಚಿತ್ರದ ಭಾಗವಾಗುತ್ತಿರುವುದಕ್ಕೆ ಖುಷಿಯಲ್ಲಿದ್ದಾರೆ. ಈ ಚಿತ್ರಕ್ಕೆ ಗಣೇಶ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದು, ರಾಧನ ಸಂಗೀತ ಸಂಯೋಜಿಸಲಿದ್ದಾರೆ. ಸುನೋಜ್ ವೆಲಯುಧನ್ ಈ ಚಿತ್ರದ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಬಾಬಾ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ.
