• January 1, 2026

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್  ಗೆ ಜಾಮೀನು: ಆದರೂ ಇಲ್ಲ ಬಿಡುಗಡೆ ಭಾಗ್ಯ

ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಸದ್ಯಕ್ಕೆ ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಸೆಲೆಬ್ರಿಟಿಗಳು ಹಾಗೂ ಸಿನಿಮಾಗಳ ಕುರಿತಾಗಿ ಬೇಕಾ ಬಿಟ್ಟಿ ಮಾತನಾಡಿ ಜೈಲು ಸೇರಿದ್ದ ಕಮಲ್ ಜೈಲಿನಿಂದ ಬಿಡುಗಡೆ ಆದ ಒಂದೇ ವಾರಕ್ಕೆ ಮತ್ತೆ ಜೈಲು ಸೇರಿದ್ದಾರೆ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ಕಮಲ್ ಆರ್ ಖಾನ್ ಗೆ ಜಾಮೀನು ಸಿಕ್ಕಿದ್ದರು ಮತ್ತೊಂದು ಪ್ರಕರಣದಲ್ಲಿ ಜೈಲಿನಲ್ಲೇ ಉಳಿದಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಮಲ್ ಆರ್ ಖಾನ್ ಗೆ ಜಾಮೀನು ಮಂಜೂರಾಗಿದೆ. ಆದರೆ ವಿವಾದಾತ್ಮಕ ಟ್ವೀಟ್​ ಪ್ರಕರಣಕ್ಕೆ ಸಂಬಂಧಿಸಿ ಕಮಲ್ ಆರ್ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. ಹೀಗಾಗಿ ಅವರು ಇನ್ನೂ ಕೆಲ ದಿನ ಜೈಲಿನಲ್ಲೇ ಮುಂದುವರಿಯುತ್ತಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ ಅನ್ನು ಕಮಾಲ್ ಆರ್. ಖಾನ್ ಮಾಡಿದ್ದರು. ಈ ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾದರು. ಇದಾದ ಬೆನ್ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಕೂಡ ಬೆಳಕಿಗೆ ಬಂದಿದ್ದು ಈ ಸಂಬಂಧ ಕೇಸ್ ದಾಖಲಾಗಿದೆ. ಎರಡೂ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕಮಾಲ್ ಆರ್. ಖಾನ್ ಬೋರಿವಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಕೋರಿದ್ದರು. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾತ್ರ ಕಮಾಲ್​ಗೆ ಜಾಮೀನು ಸಿಕ್ಕಿದೆ. ವಿವಾದಾತ್ಮಕ ಟ್ವೀಟ್ ಪ್ರಕರಣ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹೀಗಾಗಿ, ಅವರು ಜೈಲಿನಲ್ಲಿ ಇರುವುದು ಅನಿವಾರ್ಯ ಆಗಿದೆ. ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ಒಟ್ನಲ್ಲಿ ಕಮಲ್ ಖಾನ್ ರ ಒಂದೊಂದೆ ಅಪರಾಧಗಳು ಆಚೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಕೆಆರ್ ಕೆ ವಿರುದ್ಧ ಮತ್ತಷ್ಟು ದೂರುಗಳು ದಾಖಲಾಗುವ ಸಾಧ್ಯತೆ ಇದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now