ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಸೆಮಣೆ ಏರಲು ಸಜ್ಜಾದ ಕಮಲಿ ಧಾರವಾಹಿಯ ಮತ್ತೊಂದು ಜೋಡಿ
ಕಮಲಿ ಧಾರವಾಹಿಯ ಅನಿಕಾ ಅಲಿಯಾಸ್ ಗೇಬ್ರಿಯೆಲಾ ಮತ್ತು ಶಂಬು ಅಲಿಯಾಸ್ ಸುಹಾಸ್ ಪರಸ್ಪರ ಪ್ರೀತಿಸುತ್ತಿದ್ದು ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಕಮಲಿ ಧಾರವಾಹಿಯಲ್ಲಿ ಒಟ್ಟಿಗೆ ನಟಿಸಿದ್ದ ಗೇಬ್ರಿಯೆಲಾ ಹಾಗೂ ಸುಹಾಸ್ ಮಧ್ಯೆ ಪ್ರೀತಿ ಶುರುವಾಗಿದ್ದು ಕಳೆದ ಮೂರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಸದ್ಯದಲ್ಲೇ ಈ ಜೋಡಿಗಳು ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ.
ಆರಂಭದಲ್ಲಿ ಸ್ನೇಹಿತರಾಗಿದ್ದ ಗೇಬ್ರಿಯೆಲಾ ಹಾಗೂ ಸುಹಾಸ್ ಮಧ್ಯೆ ಮಾತುಕತೆ ಬೆಳೆದ ಅದು ಪ್ರೀತಿಗೆ ತಿರುಗಿದೆ.ಕಳೆದ 2 ವರ್ಷಗಳಿಂದ ರಿಲೇಷನ್ ಶಿಪ್ ನಲ್ಲಿದ್ದ ಸದ್ಯದಲ್ಲೇ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ. ಸದ್ಯ ಸುಹಾಸ್ ಪ್ರಪೋಸ್ ಮಾಡಿರುವ ವಿಡಿಯೋವನ್ನು ಗೇಬ್ರಿಯೆಲಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
