ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಜಕೀಯಕ್ಕೆ ಎಂಟ್ರಿಕೊಟ್ಟ ಸ್ಯಾಂಡಲ್ ವುಡ್ ನಟಿ ಆರೋಹಿತ
ಬೆಂಗಳೂರಿನ ವಸಂತನಗರದ ನಿವಾಸಿಯಾಗಿರುವ ಆರೋಹಿತ ಅಲಿಯಾಸ್ ಪ್ರಿಯಾಂಕ ಬಿ.ಕಾಂ ಪದವೀಧರೆಯಾಗಿದ್ದು ವಿದ್ಯಾಭ್ಯಾಸದ ಬಳಿಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಕಿರಿಕ್ ಪಾರ್ಟಿ,ಗೌಡ್ರು ಹೋಟೆಲ್,ಜಗ್ಗಿ, ಅಧ್ಯಕ್ಷ ಸೇರಿದಂತೆ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಆರೋಹಿತ ಇದೀಗ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ಆರೋಹಿತ ಕರ್ನಾಟಕ ಹಾಗೂ ದೇಶದೆಲ್ಲೆಡೆ ಬದಲಾವಣೆ ಸಾಧ್ಯವಾಗಬೇಕಾದರೆ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಅದ್ಭುತ ಬದಲಾವಣೆ ತಂದಿದೆ. ಸ್ವಚ್ಛ ಹಾಗೂ ಗುಣಮಟ್ಟದ ಆಡಳಿತದಿಂದ ಮಾತ್ರ ಇದು ಸಾಧ್ಯ. ಕರ್ನಾಟಕದಲ್ಲೂ ಅಂತಹ ಆಡಳಿತ ಬರಬೇಕು ಎಂಬ ಉದ್ದೇಶದಿಂದ ಎಎಪಿ ಪಕ್ಷಕ್ಕೆ ನಾನು ಸೇರಿದ್ದೇನೆ ಎಂದರು.
