• March 16, 2026

ಎಲ್ಲೆಲ್ಲೂ ರಿಷಬ್ ಶೆಟ್ಟಿಯದ್ದೇ ಹವಾ: ಕಾಂತಾರ ಡಬ್ಬಿಂಗ್ ಗೆ ಭರ್ಜರಿ ಡಿಮ್ಯಾಂಡ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರು ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೂಳೆಬ್ಬಿಸುತ್ತಿದೆ. ಕರಾವಳಿಯ ಭೂತ ಕೋಲದ ಕುರಿತಾದ ಕಾಂತಾರ ಚಿತ್ರಕ್ಕೆ ದೇಶ, ವಿದೇಶದ ಪ್ರೇಕ್ಷಕರು ಮನ ಸೋತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಹಳ್ಳಿ ಸೊಗಡಿನಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿಲ್ಲ. ಅದಾಗ್ಲೆ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತೆ ಗಲ್ಲ ಪೆಟ್ಟಿಗೆ ಭರ್ತಿ ಮಾಡುತ್ತಿದೆ. ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕಾಂತಾರಕ್ಕೆ ಪರಭಾಷೆಯ ಸ್ಟಾರ್ ನಟರು ಮೆಚ್ಚುಗೆ ಸೂಚಿಸಿದ್ದಾರೆ. ದಿನದಿಂದ ದಿನಕ್ಕೆ ಕಾಂತಾರ ಕ್ರೇಜ್ ಮತ್ತಷ್ಟು ಹೆಚ್ಚುತ್ತಿದೆ. ಸಿನಿಮಾವನ್ನು ಬೇರೆ ಬೇರೆ ಭಾಷೆಗೆ ಡಬ್ ಮಾಡಬೇಕು ಎಂಬ ಮಾತು ಕೇಳಿ ಬರ್ತಿದೆ. ಈ ಹಿನ್ನೆಲೆಯಲ್ಲಿ ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಚಿತ್ರವನ್ನು ಬೇರೆ ಬೇರೆ ಭಾಷೆಯಲ್ಲೂ ರಿಲೀಸ್ ಮಾಡೋಕೆ ಪ್ಲ್ಯಾನ್ ಮಾಡಿಕೊಂಡಿದೆ. ಕಾಂತಾರ ಸಿನಿಮಾ ಡಬ್ಬಿಂಗ್ ಪ್ಲಾನ್ ನಡೀತಾ ಇದೆ. ತೆಲುಗು, ತಮಿಳು, ಹಿಂದಿ ಭಾಷೆಯಲ್ಲೂ ಕಾಂತಾರ ಸಿನಿಮಾ ರಿಲೀಸ್ ಆಗುತ್ತದೆ. ಎಂದು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಈಗಾಗಲೇ ಆಯಾ ಭಾಷೆಯ ಸಿನಿಮಾ ವಿತರಕರು ಈ ಬೇಡಿಕೆಯನ್ನ ಹೊಂಬಾಳೆ ಪ್ರೋಡಕ್ಷನ್ ಹೌಸ್ ಅನ್ನ ಸಂಪರ್ಕಿಸುತ್ತಿದ್ದಾರೆ. ಶೀಘ್ರದಲ್ಲಿಯೇ ಪ್ರೋಡಕ್ಷನ್ ಹೌಸ್ ತಮ್ಮ ಸಿನಿಮಾ ಕಾಂತಾರ ಇತರ ಭಾಷೆಯಲ್ಲಿ ಡಬ್ಬಿಂಗ್ ಆಗಿ ರಿಲೀಸ್ ಮಾಡುವ ಬಗ್ಗೆ ಮಾಹಿತಿ ನೀಡಿಲಿದ್ದಾರೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now