ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟಾಪ್ 10 ನಟರ ಪಟ್ಟಿಯಲ್ಲಿ ಸ್ಥಾನ ಪಡೆದ ಯಶ್: ಅಕ್ಷಯ್ ಕುಮಾರ್ ಹಿಂದಿಕ್ಕಿದ ರಾಕಿಂಗ್ ಸ್ಟಾರ್
ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ. ಐದನೇ ಸ್ಥಾನ ಯಶ್ ಪಡೆದುಕೊಂಡಿದ್ದರೆ ಅಕ್ಷಯ್ ಕುಮಾರ್ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. ಯಶ್ ಬಾಲಿವುಡ್ ಸ್ಟಾರ್ ನಟರನ್ನೇ ಹಿಂದಿಕ್ಕುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ.
ಕೆಜಿಎಫ್ ಸಿನಿಮಾದ ಮೂಲಕ ಯಶ್ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದ್ದಾರೆ. ಯಶ್ ನಟನೆಯ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ.ಯಶ್ ಸಿನಿಮಾಗೆ ನಿರ್ದೇಶನ ಮಾಡಲು ಸ್ಟಾರ್ ನಿರ್ದೇಶಕರು ಮುಗಿ ಬಿದ್ದಿದ್ದಾರೆ. ಈ ಮಧ್ಯೆ ಯಶ್ ಬಾಲಿವುಡ್ ಸ್ಟಾರ್ ನಟರನ್ನೇ ಹಿಂದಿಕ್ಕಿ ಟಾಪ್ 10 ಪಟ್ಟಿಯಲ್ಲಿ ಹೆಸರು ಗಿಟ್ಟಿಸಿಕೊಂಡಿರೋದು ಅಭಿಮಾನಿಗಳು ಸಖತ್ ಖುಷಿ ನೀಡಿದೆ.
