ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನಲ್ಲಿ ಸಖತ್ ಬ್ಯುಸಿಯಾದ ಕಿರಣ್ ರಾಜ್: ಸೆಟ್ಟೇರಿತು ಹೊಸ ಸಿನಿಮಾ
‘ಶೇರ್’ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು ಕಿರಣ್ ರಾಜ್ ಗೆ ಜೋಡಿಯಾಗಿ ನಟಿ ಸುರೇಖಾ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಚಿತ್ರದ ಹೆಚ್ಚಿನ ದೃಶ್ಯಗಳು ಅನಾಥಾಶ್ರಮದಲ್ಲಿ ನಡೆಯಲಿವೆ.
ಬೀದರ್ ಮೂಲದ ಡಾ. ಸುದರ್ಶನ್ ಸುಂದರರಾಜ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವಕೀಲರಾಗಿ ಕೆಲಸ ಮಾಡುತ್ತಿರುವ ಸುದರ್ಶನ್ ಸುಂದರ್ ರಾಜ್ ನಿರ್ದೇಶಕರು ಹೇಳಿದ ಕಥೆ ಮೆಚ್ಚಿಕೊಂಡು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಇದೇ ಆಗಸ್ಟ್ 22ರಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ಕಿರಣ್ ರಾಜ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ದೇಶಕ ಪ್ರಸಿದ್ಧ್ ಹಾಗೂ ಕಿರಣ್ ರಾಜ್ ಕಾಂಬಿನೇಶನ್ನಲ್ಲಿ ಮೂಡಿಬಂದಿರುವ ‘ಭರ್ಜರಿ ಗಂಡು’ ಸಿನಿಮಾ ಸೆಪ್ಟೆಂಬರ್ನಲ್ಲಿ ಬಿಡುಗಡೆ ಆಗಲಿದೆ. ಆ ಚಿತ್ರದಲ್ಲಿ ಭಾಗಿಯಾಗಿದ್ದ ಬಹುತೇಕ ತಂಡವೇ ಸ್ಯ ‘ಶೇರ್’ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
