ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರೆಕಾರ್ಡ್ ಬ್ರೇಕ್ ಮಾಡಿದ ಕಾಂತಾರ: ಕೆಜಿಎಫ್ ದಾಖಲೆ ಉಡಿಸ್ ಮಾಡಿದ ರಿಷಬ್ ಸಿನಿಮಾ
ಕಾಂತಾರ ಸಿನಿಮಾ ಕೆಜಿಎಫ್ 2 ದಾಖಲೆಯನ್ನೂ ಉಡಿಸ್ ಮಾಡಿದೆ. ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಚಿತ್ರ ಪಾತ್ರವಾಗಿದೆ. ಈ ಮಾಹಿತಿಯನ್ನು ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರ್ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.
ಈವರೆಗೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ‘ಕಾಂತಾರ’. ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ. ಧನ್ಯವಾದಗಳು ಕರ್ನಾಟಕ ಎಂದು ನಿರ್ಮಾಪಕ ವಿಜಯ್ ಕಿರಂಗದೂರ ಬರೆದುಕೊಂಡಿದ್ದಾರೆ.
