• January 2, 2026

ಭೂತಾರಾಧನೆಯ ಕುರಿತು ಹೇಳಿಕೆ: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಕಾಂತಾರ ಸಿನಿಮಾದಲ್ಲಿನ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದು, ಈ ಕುರಿತಂತೆ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹಿಂದೂ ದೇವರು ಹಾಗೂ ಸಂಸ್ಕೃತಿಯ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿತ್ತು. ಈ ಸಂಬಂಧವಾಗಿ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಈ ಬಗ್ಗೆ ಪ್ರಾರ್ಥನೆ ಸಲ್ಲಿಸುತ್ತೇವೆ. ನಾವು ತಲೆತಲಾಂತರಗಳಿಂದ ಸತ್ಯವನ್ನು ಪಾಲನೆ ಮಾಡಿಕೊಂಡು ಬಂದವರು. ಭೂತಾರಾಧನೆಗೆ ಇಂತಿಷ್ಟು ವರ್ಷದ ಹಿನ್ನೆಲೆ ಎಂಬ ದಾಖಲೆ ನಮ್ಮಲ್ಲಿ ಇಲ್ಲ. ಯಾವುದೋ ಒಂದು ಪುಸ್ತಕ ಹಿಡಿದುಕೊಂಡು ಮಾತನಾಡುವುದು ತಪ್ಪು ಎಂದಿದ್ದರು. ನಟ ರಿಷಬ್ ಶೆಟ್ಟಿ ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ಹೇಳಿದ್ದರು. ಕಾಂತಾರ  ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಈ ಮಾತನ್ನು ವಿರೋಧಿಸಿದ್ದ ನಟ  ಚೇತನ್ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದು ವಿರೋಧಿಸಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now