ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭಾರತೀಯ ಚಿತ್ರರಂಗದ ಅತ್ಯುತ್ತಮ 250 ಸಿನಿಮಾಗಳ ಪೈಕಿ ಮೊದಲ ಸ್ಥಾನಕ್ಕೇರಿದ ‘ಕಾಂತಾರ’
ಈ ಮೂಲಕ ಕನ್ನಡ ಸಿನಿಮಾವೊಂದು ಈ ಮಟ್ಟಿಗಿನ ಯಶಸ್ಸಯ ಸಾಧಿಸುತ್ತಿರುವುದು ಕನ್ನಡಿಗರಿಗೆ ಸಖತ್ ಖುಷಿಯಾಗಿದೆ, ಕಾಂತಾರ ಅಭಿಮಾನಿಗಳಿಂದ ಹೆಚ್ಚು ಇಷ್ಟಪಟ್ಟ ಮತ್ತು ಹೆಚ್ಚು ರೇಟಿಂಗ್ ಪಡೆದ ಭಾರತೀಯ ಚಲನಚಿತ್ರ ಎನಿಸಿಕೊಂಡಿದೆ.
ಸಿನಿಮಾ ಬಿಡುಗಡೆ ಆಗಿ ಮೂರು ವಾರ ಕಳೆದಿದ್ರು ಎಲ್ಲೆಡೆ ಹೌಸ್ ಫುಲ್ ಬೋರ್ಡ್ ಗಳು ರಾರಾಜಿಸುತ್ತಿವೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಗೆ ಎಂಟ್ರಿಕೊಡ್ತಿದ್ದಾರೆ. ಸಾಕಷ್ಟು ಮಂದಿ ಮತ್ತೆ ಮತ್ತೆ ಚಿತ್ರಮಂದಿರಗಳಿಗೆ ಭೇಟಿ ನೀಡಿ ಸಿನಿಮಾ ನೋಡ್ತಿದ್ದಾರೆ. ಅಲ್ಲದೆ ಇನ್ನೂ ಸಾಕಷ್ಟು ಮಂದಿ ಸಿನಿಮಾ ನೋಡಲು ಕಾದು ಕೂತಿದ್ದಾರೆ. ಈ ಮಧ್ಯೆ ಕಾಂತಾರ ವಿಶ್ವದಾದ್ಯಂತ 119 ಕೋಟಿ ಗಳಿಸುವ ಮೂಲಕ 100 ಕೋಟಿ ಕ್ಲಬ್ ಸೇರಿದ 6ನೇ ಕನ್ನಡ ಚಿತ್ರವಾಗಿದೆ.
