• January 1, 2026

ಕಾಂತಾರದ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದ ಕೊಯಿಕ್ಕೋಡು ಕೋರ್ಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಬಳಸಲಾದ ಹಾಡೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಹಾಡಿಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡನ್ನು ನಾವು ಯಾವುದರಿಂದಲೂ ಕದ್ದಿಲ್ಲ ಎಂದು ನಟ ಕಂನಿರ್ದೇಶಕ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದರು. ಜೊತೆಗೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದಿದ್ದರು.  ಆದರೂ, ಕೇರಳದ ಕೊಯಿಕ್ಕೋಡು  ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ. ಇಷ್ಟು ದಿನ ಸುಮ್ಮನಿದ್ದ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಕಳೆದ ಕೆಲ ದಿನಗಳ ಹಿಂದೆ ಕಾಂತಾರ ಚಿತ್ರದ ಮೇಲೆ ಕೇಸ್​ ಹಾಕಿದ್ದರು. ‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್​’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್​ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಇತ್ತೀಚೆಗೆ ‘ತೈಕ್ಕುಡಂ ಬ್ರಿಡ್ಜ್​’ ತಂಡ ಕೊಯಿಕ್ಕೋಡು ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now