• January 1, 2026

ಗ್ರಾಹಕರಿಗೆ ಕರೆಂಟ್ ಶಾಕ್: ಮುಂದಿನ ತಿಂಗಳಿನಿಂದ 43 ಪೈಸೆ ಏರಿಕೆ

ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಪ್ರತಿಯೊಂದು ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಇದರಿಂದ ಸಾರ್ವಜನಿಕರು ಕೊಂಚ ಚೇತರಿಸಿಕೊಳ್ಳುತ್ತಿದ್ದು ಈ ಮಧ್ಯೆ ಮತ್ತೆ ಕರೆಂಟ್ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕ ಸರಿದೂಗಿಸಲು ಮುಂದಿನ ಆರು ತಿಂಗಳ ಅವಧಿಗೆ 43 ಫೈಸೆಯನ್ನು ಗ್ರಾಹಕರಿಂದ ಸಂಗ್ರಹಿಸುವಂತೆ ಬೆಸ್ಕಾಂಗೆ ಅನುಮತಿ ನೀಡಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಆಗುವ ಹೊರೆಯನ್ನು ತಪ್ಪಿಸಲು ಬೆಸ್ಕಾಂ ಈ ಶುಲ್ಕವನ್ನು ಆರು ತಿಂಗಳಿಗೆ ಆಗುವಂತೆ ಪರಿಷ್ಕರಿಸುತ್ತಿದೆ. ಕಳೆದ ಏಪ್ರಿಲ್ 2022ರಿಂದ ಜೂನ್ 2022ರ ವರೆಗೆ 643 ಕೋಟಿ ರೂಗಳಷ್ಟು ವಿದ್ಯುತ್ ಖರೀದಿ ವೆಚ್ಚ ಹೆಚ್ಚಳವಾಗಿದೆ. ಕಳೆದ ಜುಲೈ ತಿಂಗಳಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಟು ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು. ಸದ್ಯ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ 43 ಫೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now