• February 10, 2026

ಮೃತ ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ 25 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದ ಸಿಎಂ, ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಅವರ ಕುಟುಂಬಕ್ಕೆ ಆದಾಯದ ಮೂಲವಾಗಿತ್ತು. ಸರ್ಕಾರದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳನ್ನ ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ಅಲ್ಲದೆ ಕೊಲೆ ಪ್ರಕರಣ ಬೇಧಿಸುವವರೆಗೆ ಅಕ್ಷರಶಃ ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದರು. ಪ್ರವೀಣ್ ಕೊಲೆ ಮೇಲ್ನೋಟಕ್ಕೆ ಪೂರ್ವ ನಿಯೋಜಿತ ಕೃತ್ಯ ಎಂದು ಕಾಣುತ್ತಿದ್ದು ಕಳೆದ 10 ವರ್ಷಗಳಲ್ಲಿ ಈ ಭಾಗಗಳಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಸಮಾಜ ಘಾತುಕ ಶಕ್ತಿಗಳು ಬೆಂಬಲ ನೀಡುತ್ತಿರುವುದರಿಂದ ನಿರ್ಭಿತಿಯಿಂದ ಇಂತಹ ಘಟನೆಗಳು ನಡೆಯುತ್ತಿವೆ. ತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದ್ದು, ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now