ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಚಿತ್ರದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ, ದೈವ ನರ್ತನ ಮಾಡುವವರಿಗೆ 2 ಸಾವಿರ ಮಾಶಸನ: ಶಾಸಕ ಸುನೀಲ್ ಕುಮಾರ್ ಘೋಷಣೆ
ಕಾಂತಾರ ಸಿನಿಮಾ ನೋಡಿದ ಸಾಕಷ್ಟು ಮಂದಿ ದೈವ ನರ್ತನ ಮಾಡುವ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಯೋಜನೆಗಳನ್ನು ತರಬೇಕು, ಅವರಿಗಾಗಿ ಮಾಸಾಶನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ತಿಂಗಳಿಗೆ 2 ಸಾವಿರ ಮಾಶಸನ ನೀಡಲು ಮುಂದಾಗಿದೆ.
ಇನ್ನೂ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಸುನೀಲ್ ಕುಮಾರ್, ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತಾಡಬಾರದು. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲ್ಲ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ ಎಂದರು.
