• January 2, 2026

ಕನ್ನಡ ರಾಜೋತ್ಸವದಂದು ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ಪ್ರಶಸ್ತಿ ಪ್ರದಾನ

  ಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಅಪ್ಪುಗೆ ಘೋಷಣೆ ಮಾಡಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡುವುದಾಗಿ ತಿಳಿಸಿದರು. 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಉದ್ಘಾಟನೆಗೊಂಡಿರುವ ಫಲ ಪುಷ್ಪ ಪ್ರದರ್ಶನದಲ್ಲಿ ಡಾ.ರಾಜ್ ಕುಮಾರ್ ಮತ್ತು ಅಪ್ಪು ನೆನಪಿನಲ್ಲಿ ವಿಶೇಷ ಪ್ರದರ್ಶನ ಆಯೋಜನೆಗೊಂಡಿದೆ. ಪುನೀತ್ ಮತ್ತು ಡಾ.ರಾಜ್ ಪುತ್ಥಳಿಗಳನ್ನು ಲಾಲ್ ಬಾಗ್ ನಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಈ ಮೂಲಕ ಮೇರು ನಟರಿಗೆ ಸರಕಾರ ಗೌರವ ಸಲ್ಲಿಸಿದೆ. ಇಂದಿನಿಂದ ಹತ್ತು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ನೆಚ್ಚಿನ ನಟರ ವಿವಿಧ ಕಲಾಕೃತಿಗಳನ್ನೂ ಅಲ್ಲಿ ನೋಡಬಹುದಾಗಿದೆ.    

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now