ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪುಗೆ ಇಂದು ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಅಶ್ವಿನಿ ಕೈಸೇರಲಿದೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭಕ್ಕೆ ತಮಿಳಿನ ನಟ ರಜನಿಕಾಂತ್ ಮತ್ತು ತೆಲುಗಿನ ಜ್ಯೂನಿಯರ್ ಎನ್.ಟಿ.ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇವರ ಜೊತೆಗೆ ಇಸ್ಫೋಸಿಸ್ ಫೌಂಡೇಷನ್ನ ಮುಖ್ಯಸ್ಥರಾದ ಸುಧಾಮೂರ್ತಿ ಅವರ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಡಾ.ರಾಜ್ಕುಮಾರ್ ಅವರ ಕುಟುಂಬ 50 ಮಂದಿಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸುತ್ತಿರುವ 9ನೇ ವ್ಯಕ್ತಿ ಅಪ್ಪು ಆಗಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ಮರಣ್ಣೋತ್ತರವಾಗಿ ಪುನೀತ್ ರಾಜ್ಕುಮಾರ್ಗೆ ಲಭಿಸಲಿದೆ. ಸಾಹಿತ್ಯ ಕ್ಷೇತ್ರದಲ್ಲಿ ರಾಷ್ಟ್ರಕವಿ ಕುವೆಂಪು, ಸಿನಿಮಾ ರಂಗದಲ್ಲಿ ಡಾ.ರಾಜ್ಕುಮಾರ್, ರಾಜಕೀಯ ಕ್ಷೇತ್ರದಲ್ಲಿ ಎಸ್.ನಿಜಲಿಂಗಪ್ಪ, ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸಿ.ಎನ್.ಆರ್.ರಾವ್, ಸಂಗೀತ ಕ್ಷೇತ್ರದಲ್ಲಿ ಪಂಡಿತ್ ಭೀಮಸೇನ ಜೋಶಿ, ಸಮಾಜಸೇವೆ ಕ್ಷೇತ್ರದಲ್ಲಿ ಶಿವಕುಮಾರ್ ಸ್ವಾಮೀಜಿ, ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಾಹಿತ್ಯ ಕ್ಷೇತ್ರದಲ್ಲಿ ಡಾ. ದೇ.ಜವರೇಗೌಡ, ಅವರಿಗೆ ಈಗಾಗಲೇ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಇದೀಗ ಈ ಪ್ರಶಸ್ತಿ ಪುನೀತ್ ಅವರಿಗೆ ಒಲಿದಿದೆ.
