ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ ಹೆಸರು ಆಮಂತ್ರಣ ಪತ್ರಿಕೆಯಲ್ಲಿದ್ದರು ಸಿದ್ದರಾಮಯ್ಯ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಶಿಷ್ಟಾಚಾರದಂತೆ ಅವರು ನನಗೆ ಆಹ್ವಾನ ನೀಡಬೇಕಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದರೆ ಹೇಗೆ ಹೋಗುವುದಕ್ಕೆ ಸಾಧ್ಯ? ಅವರು ನನಗೆ ಆಹ್ವಾನ ನೀಡಿಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಈಗಾಗಲೇ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶೇಷ ವಿಮಾನದ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ.
