ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಸೆಮಣೆ ಏರಲು ಸಜ್ಜಾದ ಕೀರ್ತಿ ಸುರೇಶ್: ಮಹಾನಟಿಯ ಕೈ ಹಿಡಿಯಲಿರೋ ವರ ಯಾರು ಗೊತ್ತಾ?
ತಂದೆ-ತಾಯಿಗಳು ನಿಶ್ಚಯಿಸಿದ ಹುಡುಗನೊಂದಿಗೆ ಕೀರ್ತಿ ಹಸೆಮಣೆ ಏರಲು ನಿರ್ಧರಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಕೀರ್ತಿ ಸುರೇಶ್ ಮದುವೆಯಾಗುತ್ತಿರುವ ಹುಡುಗ ಉದ್ಯಮದ ಜೊತೆ ತಮಿಳು ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಹಿಂದಿಯಲ್ಲಿ ಸೂಪರ್ ಹಿಟ್ ಆದ ಮಿಮಿ ತೆಲುಗು ಮತ್ತು ತಮಿಳು ಭಾಷೆಗಳಿಗೆ ರಿಮೇಕ್ ಆಗಲಿದ್ದು ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಳ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಅವಿವಾಹಿತ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹಿಂದಿ ಮಿಮಿಯಲ್ಲಿ ಕೃತಿ ಸನೋನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಇದರ ಜೊತೆಗೆ ಭೋಲಾ ಶಂಕರ್ ಚಿತ್ರದಲ್ಲಿ ಕೀರ್ತಿ ಸುರೇಶ್ ಚಿರಂಜೀವಿ ಅವರ ತಂಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ತಮಿಳಿನ ವೇದಲಂ ಚಿತ್ರದ ತೆಲುಗು ರಿಮೇಕ್ ಆಗಿದ್ದು, ಚಿತ್ರವನ್ನು ಮೆಹರ್ ರಮೇಶ್ ನಿರ್ದೇಶನ ಮಾಡುತ್ತಿದ್ದಾರೆ.
