ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹೊಂಬಾಳೆ ಫಿಲ್ಮ್ಸ್ ಜೊತೆ ಕೈ ಜೋಡಿಸಿದ ಕೀರ್ತಿ ಸುರೇಶ್: ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಾರಾ ಮಹಾನಟಿ?
ಹೊಂಬಾಳೆ ಫಿಲ್ಸ್ಮ್ ಮೂಲಕ ಕೀರ್ತಿ ಸುರೇಶ್ ಕನ್ನಡಕ್ಕೆ ಎಂಟ್ರಿ ಕೊಡ್ತಿದ್ದಾರೆ ಎನ್ನುವ ಸುದ್ದಿ ಕಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಕೀರ್ತಿ ಸುರೇಶ್ ಗೆ ತಮಿಳಿನ ಖ್ಯಾತ ನಿರ್ದೇಶಕಿ ಸುಧಾ ಕೊಂಗಾರ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೆ ಹೊಂಬಾಳೆ ಫಿಲ್ಮ್ಸ್ ತಮಿಳಿನ ನಿರ್ದೇಶಕಿ, ಸೂರರೈ ಪೊಟ್ರು ಖ್ಯಾತಿಯ ಸುಧಾ ಜೊತೆ ಸಿನಿಮಾ ಅನೌನ್ಸ್ ಮಾಡಿದ್ದು ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಸುಧಾ ಕೊಂಗಾರ ಅವರ ಮುಂದಿನ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು ಇದರಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ಮಹಿಳಾ ಪ್ರಧಾನ ಸಿನಿಮಾವಾಗಿದ್ದ ಮಹಾನಟಿ ಚಿತ್ರದಲ್ಲಿ ಅದ್ಭುತ ನಟನೆಗೆ ಕೀರ್ತಿ ರಾಷ್ರ್ಟ ಪ್ರಶಸ್ತಿ ಪಡೆದಿದ್ದರು. ಇದೀಗ ಮತ್ತೊಂದು ಮಹಿಳಾ ಪ್ರಧಾನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಕೀರ್ತಿ ಸುರೇಶ್ ಸಜ್ಜಾಗಿದ್ದಾರೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸದ್ಯದಲ್ಲೇ ಅಧಿಕೃತ ಮಾಹಿತಿ ನೀಡಲಿದೆ.
