ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಲಕ್ಕಿ ಮ್ಯಾನ್ ಸಿನಿಮಾವನ್ನು ಬಾಚಿ ತಬ್ಬಿಕೊಳ್ಳಿ, ಮತ್ತೆ ಬೇಕು ಎಂದರು ಸಿಗಲ್ಲ: ಕಿಚ್ಚ ಸುದೀಪ್
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ವೇದಿಕೆ ಮೇಲೆ ಪುನೀತ್ ಬಗ್ಗೆ ಭಾವುಕ ಮಾತುಗಳನ್ನಾಡಿದರು. ‘ಈ ಸಿನಿಮಾ ರಿಲೀಸ್ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಹಾಗಿತ್ತು. ನಾವೆಲ್ಲರೂ ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್ ನೋಡುವಾಗ ನಾನು ಸ್ಮೈಲ್ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದರು.
ಸೆಪ್ಟೆಂಬರ್ 9ಕ್ಕೆ ‘ಲಕ್ಕಿಮ್ಯಾನ್’ ಸಿನಿಮಾ ಬಹಳ ದೊಡ್ಡಮಟ್ಟದಲ್ಲಿ ಬಿಡುಗಡೆ ಅಗುತ್ತಿದೆ. ಪ್ರಭುದೇವಾ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ ಈ ಕಾಮಿಡಿ ಫ್ಯಾಂಟಸಿ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ, ಸಂಗೀತಾ ಶೃಂಗೇರಿ ಲೀಡ್ ರೋಲ್‌ಗಳಲ್ಲಿ ಮಿಂಚಿದ್ದಾರೆ. ಪುನೀತ್ ರಾಜ್‌ಕುಮಾರ್ ದೇವರಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
