ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪಾಕ್ ನೆಲದಲ್ಲೂ ಅಬ್ಬರಿಸಲಿದ್ದಾನೆ ‘ವಿಕ್ರಾಂತ್ ರೋಣ’
ಈಗಾಗ್ಲೆ ವಿಕ್ರಾಂತ್ ರೋಣನನ್ನು ಕಣ್ಮುಂಬಿಕೊಳ್ಳಲು ವರ್ಲ್ಡ್ ವೈಡ್ ರೇಂಜ್ ನಲ್ಲಿ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ತಿದೆ. ಕಳೆದ ಮೂರು ತಿಂಗಳಿನಿಂದ ಪಾಕ್ ನೆಲದಲ್ಲಿ ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿದ್ದು ಅಲ್ಲೂ ವಿಕ್ರಾಂತ್ ರೋಣ ಸಿನಿಮಾವನ್ನು ರಿಲೀಸ್ ಮಾಡಲು ಮಾತುಕತೆ ನಡೆಯುತ್ತಿದೆ.
ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ಏಕಕಾಲಕ್ಕೆ 3200ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆ ಆಗುತ್ತಿದೆ. ಕರ್ನಾಟಕದಲ್ಲಿ 425ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ರಿಲೀಸ್ ಆಗುತ್ತಿದೆ. ವಿಕ್ರಾಂತ್ ರೋಣ ಹಿಂದಿ ವರ್ಷನ್ 900, ತೆಲುಗಿನಲ್ಲಿ 350 ಸ್ಕ್ರೀನ್ ಹಾಗೂ 27 ದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗಲಿದೆ.
ಪ್ಯಾನ್ ಇಂಡಿಯಾ ಸಿನಿಮಾವಾಗಿರೋ ವಿಕ್ರಾಂತ್ ರೋಣ 3ಡಿ ಯಲ್ಲೂ ಬಿಡುಗಡೆ ಆಗುತ್ತಿದೆ. ಈಗಾಗ್ಲೆ 3ಡಿಯಲ್ಲಿ ಸಿನಿಮಾ ನೋಡಲು ಸಾಕಷ್ಟು ಮಂದಿ ಕಾದು ಕೂತಿದ್ದು ಜುಲೈ 28ರಂದು ಸಿನಿಮಾ ಬಿಡುಗಡೆ ಆಗಲಿದೆ.
