ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗ್ಲೆ ಬಿರುಸಿನಿಂದ ಶೂಟಿಂಗ್ ನಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಕೊನೆಯ ಹಂತದ ಚಿತ್ರಕರಣದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಸ್ವತಃ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ.
ದರ್ಶನ್ ಸಿನಿಮಾ ಅಂದರೇನೆ ಹಾಗೆ. ಅವರ ಲುಕ್, ಗೆಟಪ್, ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕುತೂಹಲ. ಅದ್ರಲ್ಲೂ ಕ್ರಾಂತಿ ಸಿನಿಮಾದ ಮೇಲೆ ನಿರೀಕ್ಷೆ ತುಸು ಹೆಚ್ಚಾಗಿಯೇ ಇದೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ. ಈ ಮಧ್ಯೆ ಚಿತ್ರತಂಡ ಪೋಲ್ಯಾಂಡ್ ನಲ್ಲಿ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದೆ.
ಇತ್ತೀಚೆಗೆ ನಟ ದರ್ಶನ್, ನಟಿ ರಚಿತಾ ರಾಮ್, ನಿರ್ಮಾಪಕಿ ಶೈಲಜಾ ನಾಗ್ ಹಾಗೂ ಅವರ ಪುತ್ರಿ ಪ್ರೈವೆಟ್ ಜೆಟ್ ನಲ್ಲಿ ಪೋಲ್ಯಾಂಡ್ ಗೆ ಹಾರಿದ್ದು ಅದರ ಫೋಟೋ ಹಾಗೂ ವಿಡಿಯೋವನ್ನ ಹಂಚಿಕೊಂಡಿದ್ದರು. ವಿ.ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಟಾಕಿ ಪೋಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ಸ್ವತಃ ನಟ ದರ್ಶನ್ ಫೋಲ್ಯಾಂಡ್ ನಲ್ಲಿ ನಡೆಯುತ್ತಿರೋ ಸಿನಿಮಾದ ಸ್ಟಿಲ್ ಒಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ಸಂದರ್ಶನ ನೀಡುತ್ತಿರುವ ಫೋಟೋ ಇದಾಗಿದ್ದು ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ಎನ್ ಆರ್ ಐ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫೋಟೋ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. “ಕ್ರಾಂತಿ ಚಿತ್ರದ ಶೂಟಿಂಗ್ ಪೋಲ್ಯಾಂಡ್ ನಲ್ಲಿ ಬಿರುಸಿನಿಂದ ಸಾಗುತ್ತಿದೆ. ನಲ್ಮೆಯ ಸೆಲೆಬ್ರಿಟಿಗಳು ತೋರುತ್ತಿರುವ ಪ್ರೀತಿಗೆ ನಾ ಸದಾ ಚಿರಋಣಿ ಎಂದು ಬರೆದುಕೊಂಡಿದ್ದಾರೆ.