• June 17, 2026

ಪುನೀತ್ ರಾಜ್ ಕುಮಾರ್ ಫೋಟೋ ಹಂಚಿಕೊಂಡ ಕುಮಾರ್ ಬಂಗಾರಪ್ಪ: ಚಿನ್ನದ ನಗು ನೋಡಿ ಕಣ್ಣೀರಿಟ್ಟ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ತಿಂಗಳಾಗಿದೆ. ಆದರೂ ಇಂದಿಗೂ ಲಕ್ಷಾಂತರ ಅಭಿಮಾನಿಗಳು ಅವರ ನೆನಪಿನಲ್ಲಿ ದಿನ ಕಳೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮವಿದ್ದರು ಅಪ್ಪು ಅವರ ನೆನಪು ಅಲ್ಲಿ ಇದ್ದೇ ಇರುತ್ತೆ. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪುನೀತ್ ರಾಜ್ ಕುಮಾರ್ ನೆನಪಾಗುತ್ತಲೆ ಇರುತ್ತಾರೆ. ಸದ್ಯ ಶಾಸಕ ಕುಮಾರ್ ಬಂಗಾರಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೆಲವೊಂದು ಹಳೆಯ ಫೋಟೋಗಳನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಭಾಗಿಯಾಗಿದ್ದ ಫೋಟೋವನ್ನು ಕುಮಾರ್ ಬಂಗಾರಪ್ಪ ಹಂಚಿಕೊಂಡಿದ್ದಾರೆ. ಫೋಟೋ ಹಂಚಿಕೊಂಡ ಕುಮಾರ್ ಬಂಗಾರಪ್ಪ ಚಿನ್ನದ ನಗುವಿನ ಮನುಷ್ಯ ಎಂದು ಕ್ಯಾಪ್ಶನ್ ನೀಡಿದ್ದಾರೆ.  ಕುಮಾರ್ ಬಂಗಾರಪ್ಪ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಸಾಕಷ್ಟು ಮಂದಿ ಆ ಫೋಟೋ ಲೈಕ್ಸ್ ಮಾಡಿದ್ದು ಅವುಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಫೋಟೋಗೆ ಅಭಿಮಾನಿಗಳು ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ ಎಂದು ಕಾಮೆಂಟ್ ಮಾಡಿದ್ದಾರೆ. ಫೋಟೋದಲ್ಲಿ ಪುನೀತ್ ಅವರ ಅಮೂಲ್ಯ ನಗು ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now