• December 22, 2025

ಮೊದಲ ಬಾರಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ ವಿಶ್ವದ ಅತಿ ದೊಡ್ಡ ವಿಮಾನ

ಬೆಂಗಳೂರು: ವಿಶ್ವದ ಅತಿ ದೊಡ್ಡ ವಿಮಾನ ಎಂದೇ ಖ್ಯಾತಿ ಘಳಿಸಿರುವ ಏರ್‌ಬಸ್‌ ಎ380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಲಿದ್ದು,  ಅಕ್ಟೋಬರ್‌ 30 ರಿಂದ ನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಸೇವೆಯನ್ನು ನೀಡಿತ್ತು. ಇದೀಗ ಬೆಂಗಳೂರಿನಿಂದ ದುಬೈಗೆ ಸೇವೆ ನೀಡುತ್ತಿದ್ದು ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. 1985ರಿಂದ ಎಮಿರೇಟ್ಸ್‌ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದ್ದು, ಬೋಯಿಂಗ್‌ 777 ಹೋಲಿಕೆ ಮಾಡಿದರೆ ಶೇ.45 ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ  ಪ್ರಯಾಣಿಸಬಹುದಾಗಿದೆ. ಒಟ್ಟು 72.75 ಮೀಟರ್‌ ಉದ್ದ, 24.45 ಮೀಟರ್‌ ಎತ್ತರ ಇರುವ ಏರ್ ಬಸ್ ಎ380 ಸೂಪರ್ ಜಂಬೋ ವಿಮಾನದಲ್ಲಿ ಒಂದು ಬಾರಿಗೆ ಗರಿಷ್ಠ 853 ಮಂದಿ ಪ್ರಯಾಣಿಸಬಹುದು. ಆದರೆ ಇಲ್ಲಿಯವರೆಗೂ ಯಾವ ಕಂಪನಿಯ ವಿಮಾನಗಳು ಈ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತುಕೊಂಡು ಸಾಗಿಲ್ಲ. ಒಂದು ಬಾರಿಗೆ 3 ಸಾವಿರ ಸೂಟ್‌ಕೇಸ್‌ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಈ ವಿಮಾನ ಹೊಂದಿದೆ.    

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now