ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಮೆಜಾನ್ ಪ್ರೈಮ್ ನಲ್ಲೂ “ಲಂಕೆ”ಯ ಕೈ ಹಿಡಿದ ಪ್ರೇಕ್ಷಕ
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ “ಲಂಕೆ” ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ ಕಡೆ ಈಗಲೂ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ.
ಈಗಾಗಲೇ ಚಿತ್ರ 300 ದಿನಗಳನ್ನು ಪೂರೈಸಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾಗಲಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ರಾಮಪ್ರಸಾದ್ ಎಂ ಡಿ. ಖ್ಯಾತ ನಟ ಸಂಚಾರಿ ವಿಜಯ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದರು.
