• January 1, 2026

ಮೂರೇ ದಿನದಲ್ಲಿ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ಪೊನ್ನಿಯನ್ ಸೆಲ್ವನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ ಬಂದಿದ್ದು ಮೂರೇ ದಿನಕ್ಕೆ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.  ಪೊನ್ನಿಯನ್ ಸೆಲ್ವನ್ ಸಿನಿಮಾದ ಬಗ್ಗೆ ಬರೆದುಕೊಂಡಿರುವ ತಮಿಳು ಸಿನಿಮಾ ರಂಗದ ವಿಶ್ಲೇಷಕ ರಮೇಶ್ ಬಾಲಾ, ಪೊನ್ನಿಯಿನ್ ಸೆಲ್ವನ್ ಸಿನಿಮಾ ಬಹುತೇಕ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸಿನಲ್ಲಿ 130 ಕೋಟಿಗಳನ್ನು ಗಳಿಸಿದೆ ಎಂದು ಟ್ವಿಟ್ ಮಾಡಿದ್ದಾರೆ. ಇದು ವಿಶ್ವದಾದ್ಯಂತ ಗಳಿಸಿದ ಬಾಕ್ಸ್ ಆಫೀಸ್ ರಿಪೋರ್ಟ್ ಎಂದು ರಮೇಶ್ ಬಾಲಾ ಹೇಳಿದ್ದಾರೆ. ಕಲ್ಕಿ ಕೃಷ್ಣಮೂರ್ತಿ ಬರೆದ ಪೊನ್ನಿಯನ್ ಸೆಲ್ವನ್ ಕಾದಂಬರಿಯನ್ನು ಆಧಾರಿಸಿ ಪೊನ್ನಿಯನ್ ಸೆಲ್ವನ್ ಸಿನಿಮಾ ತಯಾರಿಸಲಾಗಿದೆ. ಸುಮಾರು 500 ಕೋಟಿ ಬಜೆಟ್ ನಲ್ಲಿ ರೆಡಿಯಾಗಿರುವ ಪೊನ್ನಿಯಲ್ ಸೆಲ್ವನ್ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ಸಂಯೋಜಿಸಿದ್ದು, ರವಿವರ್ಮನ್ ಸಿನಿಮಾಟೋಗ್ರಫಿ ಚಿತ್ರಕ್ಕೆ ಮತ್ತಷ್ಟು ಬಲ ನೀಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now