ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಣೇಶ ಹಬ್ಬಕ್ಕೆ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮಾಸ್ ಲುಕ್ ರಿಲೀಸ್
ಬಿಚ್ಚುಗತ್ತಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಾಜವರ್ಧನ್ ಮೊದಲ ಹೆಜ್ಜೆಯಲ್ಲಿಯೇ ಗೆಲುವು ತಮ್ಮದಾಗಿಸಿಕೊಂಡಿದ್ದರು. ಸದ್ಯ ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಬ್ಯುಸಿಯಾಗಿದ್ದು, ಈ ಚಿತ್ರಕ್ಕೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ.
ಸದ್ಯ ಹಿರಣ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್ ಆರ್ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಇನ್ನೂ ಸ್ಪೆಷಲ್ ರೋಲ್ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ನಟಿಸುತ್ತಿದ್ದಾರೆ. ಅಂದ ಹಾಗೇ ಹಿರಣ್ಯ ಸಿನಿಮಾದ ಟೈಟಲ್ ಡಾಲಿ ಧನಂಜಯ್ ಬಳಿ ಇತ್ತು. ಪ್ರೀತಿಯಿಂದ ಡಾಲಿ ಗೆಳೆಯ ರಾಜವರ್ಧನ್ ಗೆ ಬಿಟ್ಟು ಕೊಟ್ಟಿದ್ದಾರೆ.
