• February 10, 2026

ಹೃದಯಾಘಾತದಿಂದ  ಸಚಿವ ಉಮೇಶ್ ಕತ್ತಿ ನಿಧನ

ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಹತ್ತಿರದ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕತ್ತಿ ನಿಧನರಾಗಿದ್ದಾರೆ. 1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ ತಮ್ಮ 25ನೇ ವರ್ಷಕ್ಕೆಲ್ಲಾ ವಿಧಾನ ಸಭೆಗೆ ಪ್ರವೇಶಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಒಲವು ಹೊಂದಿದ್ದ ಉಮೇಶ್ ಕತ್ತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಪಾರ ರಾಜಕೀಯ ಅನುಭವ ಹೊಂದಿದ್ದ ಉಮೇಶ್ ಕತ್ತಿ ಅವರು ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ತಾವು ಒಂದಲ್ಲ ಒಂದು ದಿನ ನಾನು ಮುಖ್ಯಮಂತ್ರಿಯಾಗುವುದಾಗಿ ಹಲವು ಬಾರಿ ಹೇಳಿದ್ದರು. ಉಮೇಶ್ ಕತ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now