• January 1, 2026

ಹೊಸಬರ ‘ಮಾಂಕ್ ದಿ ಯಂಗ್’ ಚಿತ್ರಕ್ಕೆ ಸಾಥ್ ನೀಡಿದ ರಿಷಬ್ ಶೆಟ್ಟಿ

ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು ಜನ ನಿರ್ಮಾಪಕರು. ಐದು ನಿರ್ಮಾಪಕರೂ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್‌ ವರ್ಕ್ ಬಿರುಸಿನಿಂದ ಸಾಗಿದೆ. ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ರಿಷಭ್ ಶೆಟ್ಟಿ ಹಾಗೂ ಭಾ.ಮ.ಹರೀಶ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ. ನಾನು ಹದಿನೇಳನೇ ವಯಸ್ಸಿನಲ್ಲೇ ಆರ್ಮಿ ಸೇರಿದೆ. ನಲವತ್ತು ವರ್ಷಗಳು ಅಲ್ಲಿ ಸೇವೆ ಸಲ್ಲಿಸಿದ್ದೇನೆ. ಅಲ್ಲಿಂದ ಬಂದ ಮೇಲೆ ನನಗೆ ಚಿತ್ರದಲ್ಲಿ ನಟಿಸುವ ಆಸೆಯಾಯಿತು. ಈ ಹಿಂದೆ ಕೂಡ ಒಂದು ಚಿತ್ರದಲ್ಲಿ ಅಭಿನಯಿಸಿದ್ದೆ. ಇದು ಎರಡನೇ ಚಿತ್ರ. ಈ ಚಿತ್ರದ ಪಾತ್ರ ಕೂಡ ಚೆನ್ನಾಗಿದೆ ಎಂದರು ನಿರ್ಮಾಪಕರಲ್ಲೊಬ್ಬರಾದ ಕರ್ನಲ್ ರಾಜೇಂದ್ರನ್. ನಿರ್ಮಾಪಕರು ಹಾಗೂ ನಟರೂ ಆಗಿರುವ ವಿನಯ್ ಬಾಬು ರೆಡ್ಡಿ, ಲಾಲ್ ಚಂದ್,  ಗೋಪಿ ಚಂದ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಎಲ್ಲರು ತಮ್ಮ ಚಿತ್ರವನ್ನು ವಿಭಿನ್ನವಾಗಿ ಮಾಡಿದ್ದೇವೆ ಎನ್ನುತ್ತಾರೆ. ಅದೇ ರೀತಿ ನಾವು ಹೇಳುತ್ತೇವೆ. ಆದರೆ ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಟ್ರೇಲರ್ ನೋಡಿ ನೀವೇ ತೀರ್ಮಾನಿಸಿ. ನಿಜಕ್ಕೂ ಒಳ್ಳೆಯ ಅಡುಗೆ ಎಲ್ಲರಿಗೂ ರುಚಿಸುವ ಹಾಗೆ, ನಮ್ಮ ಚಿತ್ರ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು ಚಿತ್ರದ ನಿರ್ಮಾಪಕ ಹಾಗೂ ನಾಯಕ ಸರೋವರ. ನಾನು ಹೊಳೆನರಸೀಪುರದ ಹುಡುಗಿ. ನನಗೆ ನಟಿಸುವ ಆಸೆ. ಆದರೆ ಅದಕ್ಕೆ ಮನೆಯವರ ಪ್ರೋತ್ಸಾಹ ಇರಲಿಲ್ಲ. ನಾನು ಸಿವಿಲ್ ಎಂಜಿನಿಯರಿಂಗ್ ಓದಿ ಹೈದರಾಬಾದಿನಲ್ಲಿ ಕೆಲಸ ಮಾಡುತ್ತಿದ್ದೆ‌. ಆದರೆ ನಟನೆಯ ಮೇಲಿನ ಆಸಕ್ತಿಯಿಂದ ಕೆಲಸ ಬಿಟ್ಟು ಬಂದು ಈ ಚಿತ್ರದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಚಿತ್ರ. ರೂಪದರ್ಶಿಯಾಗೂ ಸಾಕಷ್ಟು ಹೆಸರು ‌ಮಾಡಿದ್ದೇನೆ. ಈ ಚಿತ್ರದ ಕಥೆ ಬ್ರಿಟೀಷರ ಕಾಲದಲ್ಲಿ ನಡೆಯುತ್ತದೆ. ಹಾಗಾಗಿ ಈ ಶೀರ್ಷಿಕೆ ಇಟ್ಟಿದ್ದಾರೆ ಎಂದು ನಾಯಕಿ ಸೌಂದರ್ಯ ಗೌಡ ಚಿತ್ರ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಿರಿಯ ನಟಿ ಉಷಾ ಭಂಡಾರಿ ಸಹ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಹಿರಿಯ ನಟ ಪ್ರಣಯ ಮೂರ್ತಿ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now