• January 1, 2026

ಸೆಟ್ಟೇರಿತು ಪ್ರಿಯಾಂಕ ಉಪೇಂದ್ರ ನಟನೆಯ ‘ಕೈಮರ’ ಚಿತ್ರ

ನಟಿ ಪ್ರಿಯಾಂಕ ಉಪೇಂದ್ರ ಒಂದರ ಹಿಂದೊಂದಂತೆ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಈಗಾಗ್ಲೆ ಪ್ರಿಯಾಂಕ ನಟನೆಯ ಐದಾರು ಸಿನಿಮಾಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದು ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಮಧ್ಯೆ ಪ್ರಿಯಾಂಕ ನಟನೆಯ ಹೊಸ ಸಿನಿಮಾದ ಮುಹೂರ್ತ ವಿಜಯದಶಮಿಯಂದು ನೆರವೇರಿದೆ. ಗೌತಮ್ ವಿಮಲ್ ನಿರ್ದೇಶನದ ಚಿತ್ರದಲ್ಲಿ ನಟಿ ಪ್ರಿಯಾಂಕ ಉಪೇಂದ್ರ, ಪ್ರಿಯಮಾಣಿ ಹಾಗೂ ಛಾಯಾಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ವಿ.ಮತ್ತಿಯಳಗನ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ”ಕೈಮರ” ಎಂದು ಟೈಟಲ್ ಇಡಲಾಗಿದ್ದು ರಾಜರಾಜೇಶ್ವರಿ ನಗರದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ವಿಜಯ ದಶಮಿ ಶುಭದಿನದಂದು “ಕೈಮರ” ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ ಮಗ ಗೌತಮ್ ವಿಮಲ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮತ್ತಿಯಳಗನ್ ಅವರು ನಿರ್ಮಾಣದೊಂದಿಗೆ ನಟನೆಯನ್ನು ಮಾಡುತ್ತಿದ್ದಾರೆ.  ನಾನು ಈ ಹಿಂದೆ ಸಾಕಷ್ಟು ಹಾರಾರ್ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. “ಕೈಮರ” ಚಿತ್ರದಲ್ಲಿ‌ ನಾನು ಈ ತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪ್ರಿಯಾಮಣಿ, ಛಾಯಾಸಿಂಗ್ ಅವರೊಟ್ಟಿಗೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ “ಕೆ.ಜಿ.ಎಫ್”, “ಕಾಂತಾರ ” ದಂತಹ ಡಿಫರೆಂಟ್ ಜಾನರ್ ನ ಚಿತ್ರಗಳು ಜನರ ಮೆಚ್ಚುಗೆ ಪಡೆಯುತ್ತಿದೆ. ನಮ್ಮ “ಕೈಮರ” ಚಿತ್ರದ ಕಥೆ ಸಹ ಡಿಫರೆಂಟ್ ಆಗಿದ್ದು, ನೋಡುಗರ ಮನ ಗೆಲ್ಲುವ ವಿಶ್ವಾಸವಿದೆ  ಎಂದು ನಟಿ ಪ್ರಿಯಾಂಕ ಉಪೇಂದ್ರ ಹೇಳಿದ್ದಾರೆ. ಕೈಮರ ಹಾರಾಜ್ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಸಿನಿಮಾವಾಗಿದ್ದು ಈ ಚಿತ್ರದ ಮೂಲಕ ಗೌತಮ್ ವಿಮಲ್ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೈಮರ ಸಿನಿಮಾಗಾಗಿ ಗೌತಮ್ ವಿಮಲ್ ಕೆಲಸ ಮಾಡಿದ್ದು ಕೊವೀಡ್ ಕಾರಣದಿಂದ ಚಿತ್ರೀಕರಣ ವಿಳಂಭವಾಗಿದೆ. ಅಕ್ಟೋಬರ್ ಹತ್ತರಿಂದ ಶೂಟಿಂಗ್ ಆರಂಭವಾಗಲಿದ್ದು ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now