• January 2, 2026

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹರ್ಯಾಣದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮುಲಾಯಂ ಸಿಂಗ್ ಯಾದವ್ ಕಿವಿಗೊಡುತ್ತಿದ್ದರು. ಅತ್ಯಂತ ತಳಮಟ್ಟದಿಂದ ಮುಲಾಯಂ ಸಿಂಗ್ ಯಾದವ್ ಅವರು ಬೆಳೆದುಬಂದಿದ್ದರು. ಜಯಪ್ರಕಾಶ್ ನಾರಾಯಣ್ ಮತ್ತು ಲೋಹಿಯಾ ಅವರ ಸಿದ್ಧಾಂತಗಳನ್ನು ಅನುಸರಿಸಿ ಬದ್ಧತೆ ತೋರಿದ್ದರು ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಅನೇಕ ಹಿರಿಯ ನಾಯಕರು ಸಹ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮೂರು ಭಾರಿ ಮುಲಯಾಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 1939, ನವೆಂಬರ್ 22ರಂದು ಜನಿಸಿದ ಮುಲಾಯಂ ಸಿಂಗ್ ಯಾದವ್ 1989-91, 1993-95 ಮತ್ತು 2003-07ರ ತನಕ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now