• February 10, 2026

ಮುರುಘಾ ಸ್ವಾಮೀಜಿಗೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುರುಘ ಶ್ರೀಗಳ ಕಸ್ಟಡಿ ಭಾನುವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಭಾನುವಾರ ಮುರುಘಾ ಮಠಕ್ಕೆ ಆರೋಪಿ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಕರೆತಂದಿದ್ದರು. ಈ ವೇಳೆ ಪೊಲೀಸರು ಶಿವಮೂರ್ತಿ ಸ್ವಾಮೀಜಿ ಅವರ ಬೆಡ್​​ರೂಂ, ಬಾತ್​ರೂಂ, ಕೊಠಡಿ ಮಹಜರು ಮಾಡಲಾಗಿತ್ತು. ಸಂತ್ರಸ್ತ ಬಾಲಕಿಯರು ತಮ್ಮ ಹೇಳಿಕೆಯಲ್ಲಿ ನೀಡಲಾದ ಎಲ್ಲಾ ಸ್ಥಳಗಳ ಪರಿಶೀಲನೆ ನಡೆಸಿದರು. ಕೃತ್ಯಕ್ಕೆ ಸಂಬಂಧಿಸಿದ ಕೆಲ ಸಾಕ್ಷ್ಯಗಳ ಸಂಗ್ರಹ ಮಾಡಿರುವ ಮಾಹಿತಿ ಲಭ್ಯವಾಗಿದ್ದು, ಮಠದ ಸಿಬ್ಬಂದಿಯಿಂದ ಕೆಲ ಮಾಹಿತಿ ಸಂಗ್ರಹ ಮಾಡಲಾಗಿದೆ ಎನ್ನಲಾಗಿದೆ. ಈ ವೇಳೆ ಮಠದಲ್ಲಿ ಮುರುಘಾ ಶ್ರೀಗಳನ್ನು ನೋಡಿದ ಸಿಬ್ಬಂದಿ ಒಂದು ಕ್ಷಣ ಭಾವುಕರಾದರಂತೆ, ಇತ್ತ ಮಠದಲ್ಲಿಯ ಸಿಬ್ಬಂದಿಯನ್ನು ಕಂಡು ಮುರುಘಾ ಶ್ರೀಗಳು ಕೂಡ ಭಾವುಕರಾದರು. ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿ ಬಸವಾದಿತ್ಯ ಸ್ವಾಮಿಯನ್ನು ಭಾನುವಾರ ಹೊಸಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇಂದು ಕೋರ್ಟ್​ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now