ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿಗಳು ಸದ್ಯ ಸ್ಪೇನ್ ಪ್ರವಾಸದಲ್ಲಿದ್ದಾರೆ. ಹಾಲಿಡೇ ಎಂಜಾಯ್ ಮಾಡುತ್ತಿರುವ ಜೋಡಿಗಳು ಅಲ್ಲೇ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ.

ಸ್ಪೇನ್ ನ ಬೀದಿ ಬೀದಿಗಳಲ್ಲಿ ರಾಷ್ಟ್ರ ಧ್ವಜ ಹಿಡಿದು ಸುತ್ತಾಡಿದ್ದ ನಯನತಾರಾ ಹಾಗೂ ವಿಘ್ನೇಶ್ ಅದರ ಫೋಟೊ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿದೇಶದಲ್ಲೂ ಸ್ವಾತಂತ್ರ್ಯ ಸಂಭ್ರಮಾಚರಣೆ ಮಾಡಿದ್ದಕ್ಕೆ ನಯನತಾರಾ ಅಭಿಮಾನಿಗಳು ಖುಷಿಯಾಗಿದ್ದಾರೆ. ಆದರೆ ಕೆಲವೊಂದಷ್ಟು ಮಂದಿ ಇದೆಲ್ಲಾ ಪಬ್ಲಿಸಿಟಿ ಗಿಮಿಕ್ ಅಂತಿದ್ದಾರೆ.