• December 22, 2025

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ನಗದು ಬಹುಮಾನ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗಾಗಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ. ಇದೀಗ ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಖಾಕಿ ಪಡೆ ಆರೋಪಿಗಳ ಕುರಿತು ಮಾಹಿತಿ ನೀಡುವವರಿಗೆ ಬಾರಿ ನಗದು ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಎನ್‌ಐಎ ಆರೋಪಿಗಳಾದ ಮೊಹಮ್ಮದ್ ಮುಸ್ತಫಾ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಮತ್ತು ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಗೆ ತಲಾ 2 ರೂ. ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು(31) ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಮುಂಭಾಗವೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿಮಾಡಿದ್ದರು.  ಬೈಕಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣಕ್ಕೆ ಪ್ರವೀಣ್ ಮೃತಪಟ್ಟಿದ್ದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಬಳಿಕ ಸರ್ಕಾರ ಪ್ರಕರಣವನ್ನು ಎನ್​ಐಎ ತನಿಖಗೆ ವಹಿಸಿತ್ತು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now