ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪೊನ್ನಿಯನ್ ಸೆಲ್ವನ್ ಸಿನಿಮಾ ನೋಡಿ ಚೋಳ ರಾಜರು ಹಿಂದೂಗಳಲ್ಲ ಎಂದ ಕಮಲ್ ಹಾಸನ್
ಪೊನ್ನಿಯಿನ್ ಸೆಲ್ವನ್ ಸಿನಿಮಾದ ಕಥಾ ಹಂದರದ ಕುರಿತು ಮಾತನಾಡಿರುವ ಕಮಲ್, ಚೋಳ ರಾಜರು ಹಿಂದೂಗಳಲ್ಲ ಎಂದಿದ್ದಾರೆ. ‘ಚೋಳನ ಕಾಲದಲ್ಲಿ ಹಿಂದೂ ಧರ್ಮವೇ ಇರಲಿಲ್ಲ. ರಾಜರಾಜ ಚೋಳನು ಆಳುತ್ತಿದ್ದ ವೇಳೆ ಶೈವ ಮತ್ತು ವೈಷ್ಣವ ಧರ್ಮ ಮಾತ್ರವಿತ್ತು. ಬ್ರಿಟಿಷರು ನಮ್ಮ ದೇಶಕ್ಕೆ ಬಂದಾಗ ನಮ್ಮನ್ನ ಹೇಗೆ ಕರೆಯಬೇಕು ಎಂದು ಅವರಿಗೆ ಗೊತ್ತಾಗಲಿಲ್ಲ. ಆನಂತರ ಅವರು ಹಿಂದೂ ಎಂದು ಕರೆದರು ಎಂದು ಕಮಲ್ ಹಾಸನ್ ಹೇಳಿದ್ದಾರೆ. ಸದ್ಯ ಕಮಲ್ ಹಾಸನ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ತಮಿಳಿನ ಖ್ಯಾತ ನಿರ್ದೇಶಕ ಮೆಟ್ರಿಮಾರನ್ ಕೂಡ ಪೊನ್ನಿಯಲ್ ಸೆಲ್ವನ್ ಸಿನಿಮಾದ ಕುರಿತು ಪ್ರತಿಕ್ರಿಯಿಸಿದ್ದು, ರಾಜರಾಜ ಚೋಳನು ಹಿಂದೂ ಆಗಿರಲಿಲ್ಲ ಎಂದಿದ್ದರು. ‘ನಿರಂತರವಾಗಿ ನಮ್ಮಅಸ್ಮಿತೆಯನ್ನು ಕಸಿದುಕೊಳ್ಳಲಾಗುತ್ತಿದೆ. ವಳ್ಳುವರ್ ಅವರನ್ನು ಕೇಸರಿಕರಣ ಮಾಡುವುದು ಹಾಗೂ ರಾಜ ರಾಜ ಚೋಳನನ್ನು ಹಿಂದೂ ಎಂದು ಕರೆಯುವುದು ನಡೆದೇ ಇದೆ’ ಎಂದಿದ್ದರು.
ವೆಟ್ರಿಮಾರನ್ ಮಾತಿಗೆ ತಿರುಗೇಟು ನೀಡಿದ ಬಿಜೆಪಿ ಮುಖಂಡ ಎಚ್.ರಾಜಾ ‘ನಿರ್ದೇಶಕ ವೆಟ್ರಿಮಾರನ್ ಅವರಿಗೆ ಇತಿಹಾಸ ಚೆನ್ನಾಗಿ ತಿಳಿದಿಲ್ಲ. ಅವರು ಇತಿಹಾಸವನ್ನು ಸರಿಯಾಗಿಯೂ ಓದಿಕೊಂಡಿಲ್ಲ. ರಾಜ ರಾಜ ಚೋಳನು ನಿರ್ಮಿಸಿದ ಎರಡು ಮಸೀದಿ ಅಥವಾ ಚರ್ಚ್ ತೋರಿಸಲಿ’ ಎಂದಿದ್ದರು.
