• January 1, 2026

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ರಾಜಕೀಯ ಎಂಟ್ರಿ ಬಗ್ಗೆ ಸೂಪರ್ ಸ್ಟಾರ್ ಹೇಳಿದ್ದೇನು ಗೊತ್ತಾ?

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಅನ್ನೋ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಆದರೆ ತಲೈವ ಮಾತ್ರ ಕೈಯಲ್ಲಿ ಸಾಕಷ್ಟು ಸಿನಿಮಾಗಳನ್ನ ಇಟ್ಟುಕೊಂಡು ಅವುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಾಜಕೀಯ ಎಂಟ್ರಿಯ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. 71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ ಆಗ್ತಾರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ತಲೈವ ರಾಜಕೀಯ ಎಂಟ್ರಿ ವದಂತಿಗಳ ಬೆನ್ನಲ್ಲೇ ರಜನಿಕಾಂತ್ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಿದ್ದಾರೆ. ರವಿ ಭೇಟಿಯಾದ ಬೆನ್ನಲ್ಲೇ ತಾವು ರಾಜಕೀಯಕ್ಕೆ ಬರುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ರಾಜಕೀಯ ಎಂಟ್ರಿ ವದಂತಿಗೆ ಫುಲ್ ಸ್ಟಾಪ್ ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now