ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪರಂವಃ ಬ್ಯಾನರ್ ನಲ್ಲಿ ಒಂದಾಗಲಿದ್ದಾರೆ ವಿಹಾನ್-ಅಂಕಿತಾ
ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದಲ್ಲಿ ನಟಿಸಿದ್ದ ವಿಹಾನ್ ಬಳಿಕ ಯಾವುದೇ ಸಿನಿಮಾದಲ್ಲೂ ಕಾಣಿಸಿಕೊಂಡಿರಲಿಲ್ಲ. ಮೂರು ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ರಂಜಿಸೋಕೆ ರೆಡಿಯಾಗಿರೋ ವಿಹಾನ್ ಒಂದೊಳ್ಳೆ ಕಥೆಯ ಮೂಲಕ ಪ್ರೇಕ್ಷಕರ ಮುಂದೆ ಬರೋಕೆ ರೆಡಿಯಾಗಿದ್ದಾರೆ.
ರಕ್ಷಿತ್ ಶೆಟ್ಟಿ ತಂಡದಲ್ಲಿ ಗುರುತಿಸಿಕೊಂಡಿರುವ ಚಂದ್ರಜಿತ್ ಬೆಳ್ಳಿಯಪ್ಪ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ರಕ್ಷಿತ್ ಶೆಟ್ಟಿ ಅವರ ಸೆವೆನ್ ಆಡ್ಸ್ ಟೀಂನಲ್ಲಿ ಕೆಲಸ ಮಾಡಿದ್ದ ಚಂದ್ರಜಿತ್ ಬಳಿಕ ರಿಷಬ್ ಶೆಟ್ಟಿ ಅವರ ಕಥಾಸಂಗಮ ಸಿನಿಮಾದಲ್ಲಿ ರೇನ್ ಬೋ ಲ್ಯಾಂಡ್ ಎಂಬ ಕಥೆಯನ್ನು ನಿರ್ದೇಶನ ಮಾಡಿದ್ದರು.
ಚಿತ್ರದಲ್ಲಿ ನಾಯಕ ವಿಹಾನ್ ಕಾಲೇಜು ವಿದ್ಯಾರ್ಥಿ, ಕ್ರಿಕೆಟ್ ಆಟಗಾರ ಹಾಗೂ ಉದ್ಯಮಿ ಸೇರಿದಂತೆ ಮೂರು ಶೇಡ್ ಗಳಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಆರಂಭವಾಗಿದ್ದು ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ.
