ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಯಲಿದೆ ‘ಪುನೀತ್ ಪರ್ವ’ ಕಾರ್ಯಕ್ರಮ
ಸಂಜೆ 6 ಗಂಟೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಭದ್ರತೆಗಾಗಿ ಸುಮಾರು 1400 ಪೊಲೀಸರು, 180 ಪಿಎಸ್.ಐ, 60 ಇನ್ಸೆಪೆಕ್ಟರ್, 14 ಎಸಿಪಿ ಹಾಗೂ 3 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ 20 ಕೆ.ಎಸ್.ಆರ್ಪಿ ತುಕಡಿ ಕೂಡ ಆ ಸ್ಥಳದಲ್ಲಿ ಇರಲಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರವೇ ಪ್ರವೇಶವನ್ನು ಕಲ್ಪಿಸಲಾಗುತ್ತದೆ.
ಈಗಾಗ್ಲೆ ಅರಮನೆ ಮೈದಾನಕ್ಕೆ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಸಾಕಷ್ಟು ದೂರ ದೂರದ ಊರುಗಳಿಂದ ರಾತ್ರಿಯೇ ಹೊರಟು ಅರಮನೆ ಮೈದಾನ ತಲುಪಿದ್ದಾರೆ. ಅಲ್ಲದೆ ಅಭಿಮಾನಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.
