• February 10, 2026

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.  

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now