• February 10, 2026

ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಶೀಘ್ರವೇ ಕ್ರಮದ ಭರವಸೆ

ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ರಾತ್ರಿ ಅಂಗಡಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತೊಟ್ಟಿದ್ದಾರೆ. ಪ್ರವೀಣ್ ಹತ್ಯೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಎಂದು ಬರೆದುಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now