• January 1, 2026

ಡಬ್ಬಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾದ ‘ದೂರದರ್ಶನ’ ಸಿನಿಮಾ

ವಿಭಿನ್ನ ಕಥಾನಕದ ಸುಳಿವು ನೀಡಿರುವ ದೂರದರ್ಶನ ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ದಿಯಾ ಸಿನಿಮಾ ಖ್ಯಾತಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯಾನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ  ಕಾಣಿಸಿಕೊಂಡಿದ್ದು, ಉಳಿದಂತೆ  ಹರಿಣಿ, ದೀಪಕ್‌ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್‌, ಸೂರಜ್‌ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರು ತಾರಾಗಣ ಸಿನಿಮಾದಲ್ಲಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಸಿನಿಮಾಗೆ ರಾಜೇಶ್ ಭಟ್ ನಿರ್ಮಾಣ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಉಗ್ರಂ ಮಂಜು ಜವಾಬ್ದಾರಿ ಹೊತ್ತಿದ್ದು, ಅರುಣ್ ಸುರೇಶ್ ಛಾಯಾಗ್ರಹಣ, ವಾಸುಕಿ ವೈಭವ ಸಂಗೀತ, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿಜಿ ಸಂಭಾಷಣೆ ಸಿನಿಮಾಕ್ಕಿದೆ. ಸದ್ಯ ಮಾತು ಮುಗಿಸಿರುವ ಚಿತ್ರತಂಡ ಪ್ರಮೋಷನ್ ಗೆ ಸಜ್ಜಾಗುತ್ತಿದೆ.  

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now